ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು – ಉಚಿತ ಕೋವಿಡ್ ಲಸಿಕಾ ಅಭಿಯಾನ ಶಿಬಿರ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕಗಳ ಆಶ್ರಯದಲ್ಲಿ ಉಚಿತ ಕೋವಿಡ್ 19 ಲಸಿಕಾ ಶಿಬಿರ ಕಾಲೇಜಿನ ನೇತ್ರಾವತಿ ಸಭಾಂಗಣದಲ್ಲಿ ಜೂ.29 ರಂದು ನಡೆಯಿತು.

ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ದಕ್ಷಿಣ ಕನ್ನಡ ಜಿಲ್ಲೆಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಸಿಎ.ಶಾಂತರಾಮ್ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕಿಶೋರ್ ಕುಮಾರ್ ಅವರೊಂದಿಗೆ ದೀಪವನ್ನು ಬೆಳಗಿಸುವ ಮೂಲಕ ಈ ವ್ಯಾಕ್ಸಿನೇಷನ್ ಡ್ರೈವ್ ಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಭರತ್ ಶೆಟ್ಟಿ, ಈ ಸಾಂಕ್ರಾಮಿಕ ರೋಗವನ್ನು ಹೋಗಲಾಡಿಸಲು ವಿದ್ಯಾರ್ಥಿಗಳು ಜಾಗರೂಕರಾಗಿದ್ದು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ಹೇಳಿದರಲ್ಲದೆ ಶಿಬಿರ ಆಯೋಜಿಸಿದ್ದಕ್ಕಾಗಿ ಜಿಲ್ಲಾಡಳಿತ ಮತ್ತು ಸಹ್ಯಾದ್ರಿ ಕಾಲೇಜಿಗೆ ಅಭಿನಂದನೆ ಸಲ್ಲಿಸಿದರು.

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ನ ಟ್ರಸ್ಟಿ ದೇವದಾಸ್ ಹೆಗ್ಡೆ, ಟ್ರಸ್ಟಿ ಜಗನ್ನಾಥ್ ಚೌಟ, ಪ್ರಾಂಶುಪಾಲರ ಡಾ.ರಾಜೇಶ ಎಸ್, ಉಪ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಎಸ್, ಅಕಾಡೆಮಿಕ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಶ್ರೀಲತಾ ಯು.ಎ ಮತ್ತು ವಿದ್ಯಾರ್ಥಿ ಕೌನ್ಸಿಲರ್ ಅಂಕಿತ್ ಕುಮಾರ್ ಎಸ್ ಉಪಸ್ಥಿತರಿದ್ದರು.

ಶಿಬಿರದಲ್ಲಿ 846 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಲಸಿಕೆ ನೀಡಲಾಯಿತು. ಅಡ್ಯಾರ್ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಸಮವಿತಾ, ಡಾ. ಮರಿಯಮ್ ರಶೀದಾ ಮತ್ತು ಅವರ ತಂಡ ವ್ಯಾಕ್ಸಿನೇಷನ್ ಡ್ರೈವ್ ನಡೆಸಿದರು. ವ್ಯಾಕ್ಸಿನೇಷನ್ ಡ್ರೈವ್ ಸಮಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Sponsors

Related Articles

Back to top button