ಅತ್ಯಾಚಾರ ಆರೋಪ – ಶಿಕ್ಷಕ ಬಂಧನ…

ಕಡಬ: ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ಶಿಕ್ಷಕ, ರಾಯಚೂರು ಮೂಲದ ಗುರುರಾಜ್‌ ಎಂಬಾತನನ್ನು ಅತ್ಯಾಚಾರದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಶಿಕ್ಷಕ ಗುರುರಾಜ್‌ ಪ್ರಾಜೆಕ್ಟ್‌ ವರ್ಕ್‌ ನೆಪದಲ್ಲಿ ಸುಮಾರು ಮೂರು ವರ್ಷಗಳಿಂದ ವಿಧ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು, ಅವನ ಕಾಮುಕ ಕೃತ್ಯಕ್ಕೆ ಹೆಂಡತಿಯು ಸಾಥ್‌ ನೀಡುತ್ತಿದ್ದಳು ಎನ್ನಲಾಗಿದೆ. ಅವರು ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್‌ ಮೂಲಕ ಫೋಟೋ ತೆಗೆದು ನಂತರ ಫೋಟೋ ತೋರಿಸಿ ಬೆದರಿಸಿ ಮನೆಯಿಂದ ಹಣ ತರುವಂತೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. 2018 ರಿಂದ ನಿರಂತರವಾಗಿ ಅತ್ಯಾಚಾರ ಎಸಗಿ ಬೆದರಿಕೆಯನ್ನು ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆತನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.

Related Articles

Back to top button