ಶುಭಾಷ್ ಯುವಕ ಮಂಡಲ – 75ನೇ ಸ್ವಾತಂತ್ರ್ಯೋತ್ಸವ…
ಬಂಟ್ವಾಳ: ಶುಭಾಷ್ ಯುವಕ ಮಂಡಲ ಸುಭಾಷ್ ನಗರ ಸಜಿಪಮೂಡ ಇದರ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ ನೆರವೇರಿಸಿದರು.
ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಸ್ವಾತಂತ್ರ್ಯೋತ್ಸವದ ಆಚರಣೆಯ ಮಹತ್ವವನ್ನು ವಿವರಿಸಿದರು. ಸಜಿಪಮೂಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ, ಸುಭಾಷ್ ನಗರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ವತ್ಸಲ, ಶಾರದಾ ಪೂಜಾ ಸೇವಾ ಸಮಿತಿ ಅಧ್ಯಕ್ಷ ಪ್ರಹ್ಲಾದ ಮೊದಲಾದವರು ಉಪಸ್ಥಿತರಿದ್ದರು.