ಸಂಪಾಜೆ – ಮೋಹಿನಿ ಪೆಲ್ತಡ್ಕ ರವರಿಗೆ ಸಂತಾಪ ಸೂಚಕ ಸಭೆ…

ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಗೂ ಸಂಪಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದಿವಂಗತ ಮೋಹಿನಿ ವಸಂತ ಗೌಡ ಪೆಲ್ತಡ್ಕರವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸೂಚಕ ಸಭೆಯು ಆ. 27 ರಂದು ಗೂನಡ್ಕದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಕುಂಞ ಗೂನಡ್ಕ, ಪಿ.ಎಸ್.ಗಂಗಾಧರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಸುರೇಶ್ ಅಮೈ, ಆಲೆಟ್ಟಿಯ ಕಾಂಗ್ರೆಸ್ ಮುಖಂಡರಾದ ಸತ್ಯಕುಮಾರ್ ಅಡಿಂಜ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಆಶಾ ವಿನಯ್ ಕುಮಾರ್ ಅವರು ಸಂತಾಪ ಸೂಚಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಸದಸ್ಯರಾದ ವಿಮಲಾ ಪ್ರಸಾದ್ ಹಾಗೂ ಜಿ.ಜಿ.ನವೀನ್ ಕುಮಾರ್ ಸೇರಿದಂತೆ ಇನ್ನೀತರರು ಈ ವೇಳೆ ಉಪಸ್ಥಿತರಿದ್ದರು.
ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಸರ್ವರನ್ನೂ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಂಗ್ರೆಸ್ ಕಾರ್ಮಿಕ ಘಟಕದ ಮುಖಂಡರಾದ ಜ್ಞಾನಶೀಲನ್ ನೆಲ್ಲಿಕುಮೇರಿ ವಂದಿಸಿದರು.

Related Articles

Back to top button