ಕರೋನಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ 2 ಕೋಟಿ 5 ಲಕ್ಷ ಜನರಿಗೆ ನೆರವಾಗಿದೆ – ಸಲೀಂ ಅಹ್ಮದ್…

ಬೆಂಗಳೂರು:ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ವತಿಯಿಂದ ಮಾರಪ್ಪನಪಾಳ್ಯ ದಲ್ಲಿ ಆ.28 ರಂದು ನಡೆದ ಉಚಿತ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರು,
ಕರೋನಾದ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷದಿಂದ 2 ಕೋಟಿ 5 ಲಕ್ಷ ಜನರಿಗೆ ನೆರವಾಗಿದೆ. ಕಾಂಗ್ರೆಸ್ ಪಕ್ಷವು ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್ ವರೆಗೂ ಕೋವಿಡ್ ನಿಂದ ಸಿಲುಕಿದ ಜನರಿಗೆ ಸ್ಪಂದಿಸಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಂತ ಹಣದಿಂದ 2 ಕೋಟಿ 5 ಲಕ್ಷ ಜನರಿಗೆ ನೆರವಾಗಿದ್ದೇವೆ. ಸರ್ಕಾರ ಮಾಡುವ ಕೆಲಸ ನಮ್ಮ ಪಕ್ಷ ಮಾಡಿದೆ. ಕಾಂಗ್ರೆಸ್ ಪಕ್ಷವು ನಿರಂತರವಾಗಿ ಜನರ ಪರವಾಗಿ ಕೆಲಸ ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದರು.
ಕೊರೋನಾ ಮೂರನೇ ಅಲೇಯ ಮುನ್ಸೂಚನೆ ಇದ್ದರೂ ರಾಜ್ಯ ಸರ್ಕಾರ ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡಿಲ್ಲ. ಮಕ್ಕಳ ಬಗ್ಗೆ ಕೂಡ ಸರ್ಕಾರ ಕಾಳಜಿ ವಹಿಸುತ್ತಿಲ್ಲ. ಲಸಿಕೆಗಳು ಕೂಡ ಜನರಿಗೆ ಸರಿಯಾಗಿ ಸಿಗುತ್ತಿಲ್ಲ. ಕಳೆದ ಎರಡು ತಿಂಗಳಲ್ಲಿ ಕಾಂಗ್ರೆಸ್ ಪಕ್ಷವು 224 ವಿಧಾನ ಸಭಾ ಕ್ಷೇತ್ರದಲ್ಲಿ ಜನರ ಪರವಾಗಿ ಕೆಲಸ ಮಾಡಿದೆ. ಪಕ್ಷದ ವತಿಯಿಂದ 1700 ಆಂಬುಲೆನ್ಸ್ ಒದಗಿಸಲಾಗಿದೆ. 26 ಲಕ್ಷ ದಿನಸಿ ಕಿಟ್ ಗಳನ್ನು ಬಡವರಿಗೆ ಹಂಚಿದ್ದೇವೆ. 93 ಲಕ್ಷ ಆಹಾರ ಕಿಟ್ ಗಳನ್ನು ಪೂರೈಸಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿಕೆ ಹರಿಪ್ರಸಾದ್,ಮಾಜಿ ವಿಧಾನಸಭಾ ಅಭ್ಯರ್ಥಿಗಳು ಹಾಗೂ ಮಾಜಿ ಕಾರ್ಪೋರೇಟರ್ ಶಿವರಾಜ್, ಮಾಜಿ ಕಾರ್ಪೋರೇಟರ್ ಕೇಶವಮೂರ್ತಿ, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಗೌಡ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಮನೋಹರ್, ಮಾಜಿ ಕಾರ್ಪೋರೇಟರ್ ಕೃಷ್ಣಮೂರ್ತಿ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.