ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಚಿಲುಮೆ-2021ರ ಬಹುಮಾನ ವಿತರಣೆ…

ಪುತ್ತೂರು: ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸದ ಮಟ್ಟವನ್ನು ಹೆಚ್ಚಿಸಿ ಆ ಮೂಲಕ ಅವರಿಗೆ ಇನ್ನೂ ಹೆಚ್ಚಿನ ಪ್ರದರ್ಶನವನ್ನು ನೀಡುವುದಕ್ಕೆ ಅನುವು ಮಾಡಿ ಕೊಡುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಹೇಳಿದರು.
ಅವರು ಎಂಜಿನಿಯರಿಂಗ್ ಕಾಲೇಜಿನ ಭೂಮಿಕಾ ಕಲಾ ಸಂಘದ ಆಶ್ರಯದಲ್ಲಿ 5 ದಿನಗಳ ಕಾಲ ನಡೆದ ಸಾಂಸ್ಕೃತಿಕ ಹಬ್ಬ ಚಿಲುಮೆ-2021 ರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತದೆ ಮತ್ತು ಉತ್ತಮ ವೃತ್ತಿ ಜೀವನವನ್ನು ಕಂಡುಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ವಾಸ್ತವವಾಗಿ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ಚಿಲುಮೆಯ ಯಶಸ್ಸಿನ ಬಗ್ಗೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ. ಸುದರ್ಶನ್.ಎಂ.ಎಲ್ ಮಾತನಾಡಿ ಕಳೆದ ಎರಡು ವರ್ಷಗಳಲ್ಲಿ ಕಳೆದುಕೊಂಡ ಉತ್ತಮ ಅವಕಾಶವನ್ನು ಈ ಬಾರಿ ವಿದ್ಯಾರ್ಥಿಗಳು ಸಮರ್ಥವಾಗಿ ಬಳಸಿಕೊಂಡಿದ್ದಾರೆ. ಸಂದಿಗ್ಧ ಪರಿಸ್ಥಿತಿಯ ಮಧ್ಯೆಯೂ ಸಕ್ರಿಯವಾಗಿ ಭಾಗವಹಿಸಿ ಯಶಸ್ಸಿನ ರಾಯಭಾರಿಗಳಾಗಿದ್ದಾರೆ ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸುಬ್ರಮಣ್ಯ ಭಟ್.ಟಿ.ಎಸ್, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ಸಾಂಸ್ಕೃತಿಕ ಕಾರ್ಯದರ್ಶಿ ದೀಪಾ ಖಂಡಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಮಾರಂಭದಲ್ಲಿ ಹಾಜರಿದ್ದರು.
ಚಿಲುಮೆ-2021ರ ಮೊದಲ ಸಮಗ್ರ ಪ್ರಶಸ್ತಿಯನ್ನು ಎಂಬಿಎ ವಿಭಾಗದ ವಿದ್ಯಾರ್ಥಿಗಳು ಮತ್ತು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪ್ರಥಮ ವರ್ಷದ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪಡೆದುಕೊಂಡರು.
ಪ್ರೊ. ಶ್ವೇತಾಂಬಿಕಾ.ಪಿ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿಯರಾದ ಶ್ರೀಜಾ ಶೆಟ್ಟಿ ಸ್ವಾಗತಿಸಿ, ಧರಿತ್ರಿ ವಂದಿಸಿದರು. ಭಾವನಾ ಕಾರ್ಯಕ್ರಮ ನಿರ್ವಹಿಸಿದರು.

Sponsors

Related Articles

Back to top button