ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರ ದಿನಾಚರಣೆ, ಸನ್ಮಾನ ಕಾರ್ಯಕ್ರಮ…

ಸುಳ್ಯ: ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಕನ್ನಡ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ರೊ| ಎಂ.ಮೀನಾಕ್ಷಿ ಗೌಡ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಂತಮಂಗಲ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾದ ಶಿಕ್ಷಕಿ ಶ್ರೀಮತಿ ಗಿರಿಜಾಂಬಾ ಬಿ ಹಾಗೂ ಸರಕಾರಿ ಪ್ರೌಢ ಶಾಲೆ ಆಲೆಟ್ಟಿಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾದ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಎಸ್ ರವರನ್ನು ‘ಉತ್ತಮ ಶಿಕ್ಷಕಿ ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಮತಿ ಶಶಿಕಲಾ ಹರಪ್ರಸಾದ್ ಸ್ವಾಗತಿಸಿ, ಗಿರಿಜಾ ಎಂ.ವಿ. ಯವರು ವಂದಿಸಿದ ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಇಂದಿರಾ ಆರ್ ರೈ , ಉಪಾಧ್ಯಕ್ಷೆ ಕವಿತಾ ಸಿ ರೈ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ಆಶಾ ಕಾರ್ಯಕ್ರಮ ನಿರೂಪಿಸಿದರು.
ನಂತರ ಶುಭಶ್ರೀ ಮಹಿಳಾ ಮಂಡಲದ ಮಹಾಸಭೆಯು ನಡೆಯಿತು. ಮೀನಾಕ್ಷಿ ಗೌಡ ಅವರು ಗೌರವ ಸಲಹೆಗಾರರಾಗಿ ಮಹಾಸಭೆಯಲ್ಲಿ ಉತ್ತಮ ಸಲಹೆ ಸೂಚನೆಗಳನ್ನು ನೀಡಿದರು.

F2e1ddca 3888 4dcd 8265 D8659f02436b 300x225

Related Articles