ಮಲೆನಾಡು ಚಾರಿಟೇಬಲ್‌ ಟ್ರಸ್ಟ್‌ – ಮಲೆನಾಡ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭ…

ಸುಳ್ಯ: ಸುಳ್ಯದ ಮಲೆನಾಡು ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷ ಕೊಡಲ್ಪಡುವ ಮಲೆನಾಡ ಸಿರಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದು, ಅವರಿಗೆ ಸುಳ್ಯ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಿವೃತ್ತ ಮುಖ್ಯ ಶಿಕ್ಷಕಿ ವನಜಾಕ್ಷಿ ಆಲೆಟ್ಟಿ, ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು. ,ಬೆಳ್ಳಾರೆ ಪ.ಪೂ.ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಗ್ರೀನ್‌ವ್ಯೂ ಪ್ರೌಢಶಾಲಾ ಶಿಕ್ಷಕಿ ಪ್ರತಿಭಾ ಆಳ್ವ ಪ್ರಶಸ್ತಿ ಸ್ವೀಕರಿಸಿದರು.
ಸುಳ್ಯ ತಹಶೀಲ್ದಾರ್ ಕು.ಅನಿತಾಲಕ್ಷ್ಮಿ , ಕೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ಮಹಾದೇವ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸನ್ಮಾನಿಸಿದರು. ನಗರ ಪಂಚಾಯತ್‌ ಮಾಜಿ ಅಧ್ಯಕ್ಷ ಎಸ್‌.ಸಂಶುದ್ದಿನ್‌, ಟ್ರಸ್ಟ್‌ ನ ಗೌರವಾಧ್ಯಕ್ಷ, ನ.ಪಂ.ಮಾಜಿ ಸದಸ್ಯ ಕೆ.ಎಂ.ಮುಸ್ತಫಾ, ಮಿಸೆಸ್‌ ಕರ್ನಾಟಕ ದೀಪಿಕಾ ಅಡ್ತಲೆ ಅತಿಥಿಯಾಗಿದ್ದರು. ಮಲೆನಾಡು ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ರಿಯಾಜ್‌ ಕಟ್ಟೆಕ್ಕಾರ್‌, ನಿರ್ದೇಶಕ ಸಿದ್ದಿಕ್‌ ಕೊಕ್ಕೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೇವಿಪ್ರಸಾದ್‌ ಕಾರ್ಯಾತೋಡಿ ಪ್ರಾರ್ಥಿಸಿದರು. ಟ್ರಸ್ಟ್‌ ನ ನಿರ್ದೇಶಕ ಶರೀಫ್‌ ಜಟ್ಟಿಪಳ್ಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.ಶಿಕ್ಷಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button