ಬಂಟ್ವಾಳ ತಾಲೂಕು ಮಟ್ಟದ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ…

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಬಿ ಸಿ ರೋಡಿನ ಅಜ್ಜಿಬೆಟ್ಟು ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟು ಇಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿ, ಕೋವಿಡ್ ನ ಸಂಕಷ್ಟದ ಸಮಯದಲ್ಲಿ ಶೈಕ್ಷಣಿಕ ಅವಧಿಗೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪ್ರಾರಂಭ ಮಾಡಲು ಸರಕಾರ ಮುಂದಾಗಿದೆ. ಕೊರೊನಾ ಸಂಬಂದಿಸಿದಂತೆ ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿಕೊಂಡು ತರಗತಿಗಳನ್ನು ಪ್ರಾರಂಭಿಸಲು ಸರಕಾರ ಸೂಚನೆ ನೀಡಿದೆ. ಸರಕಾರದ ಸೂಚನೆಯನ್ನು ಪಾಲಿಸಿಕೊಂಡು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ರೀತಿಯ ಸಮಸ್ಯೆಗಳು ಆಗದ ರೀತಿಯಲ್ಲಿ ಕಾರ್ಯಚಟುವಟಿಕೆಗಳನ್ನು ನಿರ್ವಹಿಸುವ ಮೂಲಕ ಶಿಕ್ಷಣ ಇಲಾಖೆ ಹೆಚ್ಚಿನ ಜವಬ್ದಾರಿ ಯನ್ನು ವಹಿಸಿಬೇಕು ಎಂದರು.
ಪಠ್ಯಪುಸ್ತಕ ಗಳನ್ನು ವಿದ್ಯಾರ್ಥಿಗಳ ಪೋಷಕರು ಶಾಸಕರ ಮೂಲಕ ಪಡೆದುಕೊಂಡರು.ಕಾರ್ಯಕ್ರಮ ದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಗಣೇಶ್ ಆಚಾರ್ಯ, ಸದಸ್ಯ ರಾದ ಸದಾನಂದ ರಂಗೋಲಿ, ರಾಜೇಶ್, ಸ್ಥಳೀಯ ಪ್ರಮುಖರಾದ ನಾಗೇಶ್ ಅಜ್ಜಿಬೆಟ್ಟು, ಗೋಪಾಲ ಸುವರ್ಣ, ಪ್ರಮೋದ್ ಅಜ್ಜಿಬೆಟ್ಟು, ಕೇಶವ ದೈಪಲ, ಪ್ರದೀಪ್ ಅಜ್ಜಿಬೆಟ್ಟು, ಪ್ರಣಾಮ್ ಅಜ್ಜಿಬೆಟ್ಟು,
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ , ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ನೋಣಯ್ಯ ಮತ್ತಿತರರು ಉಪಸ್ಥಿತರಿದ್ದರು.
ಅಜ್ಜಿಬೆಟ್ಟು ಶಾಲಾ 9 ತರಗತಿಯ ವಿದ್ಯಾರ್ಥಿನಿ ಭವ್ಯ ಶ್ರೀ ಅಮ್ಟಾಡಿ ಇತ್ತೀಚಿಗೆ ಕಾಯಿಲೆಯೊಂದಕ್ಕೆ ತುತ್ತಾಗಿ ತುರ್ತುನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ವಿಶೇಷ ಕಾಳಜಿ ವಹಿಸಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿ, ಬದುಕಿಗೆ ಆಸರೆಯಾದ ಶಾಸಕ ರಾಜೇಶ್ ನಾಯ್ಕ್ ಅವರನ್ನು ವಿದ್ಯಾರ್ಥಿನಿಯ ತಾಯಿ ಪುಸ್ತಕ ಗೌರವ ಅರ್ಪಿಸಿ ಅಮೂಲಕ ಧನ್ಯವಾದ ಅರ್ಪಿಸಿದ ಕ್ಷಣ ಕಾರ್ಯಕ್ರಮದ ವಿಶೇಷವಾಗಿತ್ತು.

Sponsors

Related Articles

Back to top button