ಸುಳ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಗಾಂಧಿ ಜಯಂತಿ…

ಸುಳ್ಯ: ಸುಳ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಬೆಳ್ಳಾರೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ದೀಪಿಕಾ ಹಾಗೂ ಬೆಳ್ಳಾರೆಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು, ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ ದಿನೇಶ್ ಚಂದ್ರ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಸದಸ್ಯರು ಹಾಗೂ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.
ಸ್ವಚ್ಚತಾ ಕಾರ್ಯಕ್ರಮವನ್ನು ವಿದ್ಯಾರ್ಥಿನಿಲಯದ ಆವರಣದಲ್ಲಿ ನಡೆಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಕೇರ್ಪಳ ಕಾರ್ಯಕ್ರಮ ನಿರೂಪಿಸಿದರು. ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್ ಸಾರಕೆರೆ ಸ್ವಾಗತಿಸಿ ವಂದಿಸಿದರು.

Deed6dcc 8bd5 4fda B55c 08670c10805c 300x139

98905c59 7bc0 4f17 Bd7f D3de5a98559b Scaled E1633322952119 300x139

Related Articles