ಸುಳ್ಯ ನ್ಯಾಯಾಲಯಕ್ಕೆ ಹಾಜರಾದ ಡಿ.ಕೆ. ಶಿವಕುಮಾರ್…

ಸುಳ್ಯ:ಕೆಪಿಸಿಸಿ ಅಧ್ಯಕ್ಷ , ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸುಳ್ಯಕ್ಕೆ ಆಗಮಿಸಿದ್ದಾರೆ. 11 ಗಂಟೆಗೆ ಸುಳ್ಯಕ್ಕೆ ಆಗಮಿಸಿದ ಅವರಿಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ನಂತರ ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ, ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಹಾಯಕ ಅಭಿಯೋಜಕರು ಮತ್ತು ವಕೀಲರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿ ಸಾಕ್ಷ್ಯ
ನುಡಿದರು. ಅವರು ಅರ್ಧ ಗಂಟೆಗಳ ಕಾಲ ಎಪಿಪಿ ಮತ್ತು ವಕೀಲರ ಜೊತೆ ಮಾತುಕತೆ ನಡೆಸಿ 11.30ಕ್ಕೆ ನ್ಯಾಯಾಲಯ ಕಲಾಪಕ್ಕೆ ಹಾಜರಾದರು. ವಿದ್ಯುತ್ ಸಮಸ್ಯೆ ಸಂಬಂಧಪಟ್ಟು ಡಿ.ಕೆ.ಶಿವಕುಮಾರ್ ಮತ್ತು ಬೆಳ್ಳಾರೆಯ ಸಾಯಿ ಗಿರಿಧರ್ ನಡುವಿನ ಫೋನ್ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಶಿವಕುಮಾರ್ ಅವರು ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿ ಸಾಕ್ಷ್ಯ ನುಡಿದರು.