ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ…..
ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಮಾಣಿ ವಲಯ , ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಮತ್ತು ಲಯನ್ಸ್ ಕ್ಲಬ್ ಮಾಣಿ ಹಾಗು ಇಂಟರ್ಯಾಕ್ಟ್ ಕ್ಲಬ್ ಕರ್ನಾಟಕ ಪ್ರೌಢ ಶಾಲೆ ಮಾಣಿ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.
ಹದಿ ಹರೆಯದ ವಯಸ್ಸು ಚಟಗಳಿಗೆ ಬಲಿಯಾಗುವ ವಯಸ್ಸು , ಈ ಕಾಲ ಘಟ್ಟದಲ್ಲಿ ಯಾವುದೇ ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ಸನ್ನಡತೆಯ ಜೀವನವನ್ನು ರೂಪಿಸಿಕೊಳ್ಳ ಬೇಕೆಂದು ಸಮಾರಂಭದ ಉದ್ಘಾಟಕರಾದ ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಗಂಗಾಧರ ರೈ ಯವರು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿರುವ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಕೆಯ್ಯಾರು ನಾರಾಯಣ ಭಟ್ ರವರು ದುಶ್ಚಟ ಮುಕ್ತ ಸಮಾಜ ನಮ್ಮದಾಗಬೇಕು, ಸಹವಾಸ ದೋಷದಿಂದ ಜೀವನ ಹಾಳು ಮಾಡಬಾರದು, ಉತ್ತಮ ಶಿಕ್ಷಣ ಪಡೆಯ ಬೇಕು. ಆರೋಗ್ಯವಂತರಾಗಿ, ಗೌರವಯುತರಾಗಿ ಬದುಕನ್ನು ರೂಪಿಸಿಕೊಳ್ಳ ಬೇಕೆಂದು ಹೇಳಿದರು.
ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಅಧ್ಯಕ್ಷರಾದ ರೋ. ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಬಿ.ಕೆ ಭಂಡಾರಿಯವರು ಪ್ರಾಸ್ತವಿಕ ಭಾಷಣ ಮಾಡಿದರು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ , ಮಾಣಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೋಹಿತಾಕ್ಷ,ಸೇವಾ ಪ್ರತಿನಿಧಿಗಳಾದ ಜಯಶ್ರೀ , ಶಶಿಕಲಾ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.