ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಕಠಿಣ ಕ್ರಮ…
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ 14 ದಿನ ರಾಜ್ಯಾದ್ಯಂತ ಮತ್ತಷ್ಟು ಬಿಗಿ ಕ್ರಮಗಳನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 15 ದಿನದ ಬಳಿಕವೂ ಪರಿಸ್ಥಿತಿ ಮತ್ತೆ ಹತೋಟಿಗೆ ಬಾರದಿದ್ದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದೂ ತಿಳಿದುಬಂದಿದೆ.
ಸಚಿವ ಸಂಪುಟದ ಸಹೋದ್ಯೋಗಿಗಳು, ತಜ್ಞರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು,ಬೆಳಿಗ್ಗೆ 6 ರಿಂದ 10 ಗಂಟೆ ನಡುವೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರೆಯಲಿದೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯರೆಗೂ ಕರ್ಫ್ಯೂ ಮುಂದುವರೆಯಲಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.