ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಆಯುಧ ಪೂಜೆ ಮತ್ತು ಶಾರದಾ ಪೂಜೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆಯು ವಿಜೃಂಭಣೆಯಿಂದ ನೆರವೇರಿತು.
ಬೆಳಗ್ಗೆ ಗಣಪತಿ ಹವನನೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡು ವಿವಿಧ ವಿಭಾಗಗಳ ಪ್ರಯೋಗಾಲಯಗಳಿಗೆ ತೆರಳಿ ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಶಾರದಾ ಪೂಜೆಯ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಉಪಾಧ್ಯಕ್ಷ ಶ್ರೀ.ಸತೀಶ್ ರಾವ್.ಪಿ, ಎಂಜಿನಿಯರಿಂಗ್ ಕಾಲೇಜಿನ ಕೋಶಾಧಿಕಾರಿ ಶ್ರೀ,ಮುರಳೀಧರ ಭಟ್.ಬಿ, ನಿರ್ದೇಶಕರುಗಳಾದ ಶ್ರೀ.ಸುಬ್ರಮಣ್ಯ ಭಟ್.ಟಿ.ಎಸ್, ಶ್ರೀ.ರವಿಕೃಷ್ಣ.ಡಿ.ಕಲ್ಲಾಜೆ, ಶ್ರೀ.ವಿಶ್ವಾಸ್ ಶೆಣೈ, ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related Articles

Back to top button