ಸಹ್ಯಾದ್ರಿ ಕಾಲೇಜ್ ನಲ್ಲಿ ನಾಯಕತ್ವ ಅಭಿವೃದ್ಧಿ ತರಬೇತಿ ಕಾರ್ಯಕ್ರಮ…..

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎಂಬಿಎ ವಿಭಾಗದ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿ ಪರಿಷತ್ ಸದಸ್ಯರಿಗಾಗಿ ನಾಯಕತ್ವ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಸೆ.20 ರಂದು ಆಯೋಜಿಸಲಾಯಿತು.
ಕೋಸ್ಟಲ್ ವುಡ್ ನಟ ಶ್ರೀ ಪೃಥ್ವಿ ಅಂಬರ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ವಿ ಮಾಲಿನಿ ಅವರು ಭಾಗವಹಿಸಿ ಶುಭ ಹಾರೈಸಿದರು.
ಸಹ್ಯಾದ್ರಿ ಕಾಲೇಜು ಪ್ರಾಂಶುಪಾಲ ಡಾ. ಆರ್. ಶ್ರೀನಿವಾಸ ರಾವ್ ಕುಂಟೆ ಅಧ್ಯಕ್ಷತೆ ವಹಿಸಿದ್ದರು. ಎಂಬಿಎ ನಿರ್ದೇಶಕ ಡಾ. ವಿಶಾಲ್ ಸಮರ್ಥಾ ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಪ್ರೊ. ಸುಷ್ಮಾ ವಿ ಪ್ರಸ್ತಾವನೆಗೈದರು. ಡಾ. ವಿಶಾಲ್ ಸಮರ್ಥ, ಡಾ. ಶರಣ್ ಕುಮಾರ್ ಶೆಟ್ಟಿ, ಪ್ರೊ. ರಮೇಶ್ ಕೆ ಜಿ, ಪ್ರೊ. ಸಮರ್ಥ್ ಶೆಣೈ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 22 ಕಾಲೇಜುಗಳ ಒಟ್ಟು 221 ಯುಜಿ ವಿದ್ಯಾರ್ಥಿ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು.LDP@Sahyadri 03 E1569052685720 300x135

Related Articles

Leave a Reply

Your email address will not be published. Required fields are marked *