ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಎಲೆಕ್ಟ್ರಾನಿಕ್ಸ್ ವಿದ್ಯಾರ್ಥಿ ಸಂಘದ ಉದ್ಘಾಟನೆ,ತಾಂತ್ರಿಕ ಉಪನ್ಯಾಸ…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ಎಕೊಲೆಕ್ಟಿಕ್ ಇದರ ಉದ್ಘಾಟನೆ ಮತ್ತು ತಾಂತ್ರಿಕ ಉಪನ್ಯಾಸ ಅ. 27 ರಂದು ನಡೆಯಿತು.
ಎನ್ಎಂಎಎಂಐಟಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ರೋಷನ್ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ನೈಸರ್ಗಿಕ ಭಾಷಾ ಸಂಸ್ಕರಣೆ ( ನ್ಯಾಚುರಲ್ ಲ್ಯಾಂಗ್ವೇಜ್ ಪ್ರೊಸೆಸಿಂಗ್) ವಿಷಯದಲ್ಲಿ ಅವರು ತಾಂತ್ರಿಕ ಉಪನ್ಯಾಸ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಮಾತನಾಡಿ ಕೌಶಲ್ಯಾಭಿವೃದ್ಧಿ ಮತ್ತು ಪುನರ್ ಕೌಶಲ್ಯದ ಪ್ರಾಮುಖ್ಯತೆಯನ್ನು ವಿವರಿಸಿ, ವಿದ್ಯಾರ್ಥಿ ಸಂಘ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಪೂರ್ಣ ಪ್ರಯೋಜನ ಪಡೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಉಪಸ್ಥಿತರಿದ್ದರು.
ವಿಭಾಗ ಮುಖ್ಯಸ್ಥ ಪ್ರೊ.ಗಂಗಾಧರ ಸ್ವಾಗತಿಸಿದರು. ವಿದ್ಯಾರ್ಥಿನಿ ಫೀಝ ಮತ್ತು ತಂಡದವರು ಪ್ರಾರ್ಥಿಸಿದರು. ಎಕೊಲೆಕ್ಟಿಕ್ ಸಂಘದ ಅಧ್ಯಕ್ಷ ಸಾಯೀಶ್ ಸಂಘದ ಯೋಜನೆಗಳನ್ನು ತಿಳಿಸಿದರು . ದಿವ್ಯಶ್ರೀ ಅತಿಥಿ ಪರಿಚಯ ಮಾಡಿದರು. ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ISTE ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಡಾ. ರೋಷನ್ ಫೆರ್ನಾಂಡಿಸ್ ಅವರು ನೈಸರ್ಗಿಕ ಭಾಷಾ ಸಂಸ್ಕರಣೆ ( ನ್ಯಾಚುರಲ್ ಲ್ಯಾಂಗ್ವೇಜ್ ಪ್ರೊಸೆಸಿಂಗ್) ವಿಷಯದಲ್ಲಿ ತಾಂತ್ರಿಕ ಉಪನ್ಯಾಸ ನೀಡಿದರು.