ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಎಲೆಕ್ಟ್ರಿಕಲ್ ವಿದ್ಯಾರ್ಥಿ ಸಂಘದ ಉದ್ಘಾಟನೆ,ತಾಂತ್ರಿಕ ಉಪನ್ಯಾಸ…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ” EMERGE ” ಇದರ ಉದ್ಘಾಟನೆ ಮತ್ತು ತಾಂತ್ರಿಕ ಉಪನ್ಯಾಸ ಅ. 28 ರಂದು ನಡೆಯಿತು.
ಮಂಗಳೂರು ಕೆಪಿಟಿಸಿಎಲ್ ನ ರಿಲೇ ಟೆಸ್ಟಿಂಗ್ ವಿಭಾಗದ ಸಹಾಯಕ ಇಂಜಿನಿಯರ್ ಗಣೇಶ್ ಪೂಜಾರಿ ಮುಖ್ಯ ಅತಿಥಿಗಳಾಗಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. EHV ಸಬ್ ಸ್ಟೇಷನ್ ಮ್ಯಾನೇಜ್ ಮೆಂಟ್ ವಿಷಯದಲ್ಲಿ ಅವರು ತಾಂತ್ರಿಕ ಉಪನ್ಯಾಸ ನೀಡಿದರು.
ವಿಭಾಗ ಮುಖ್ಯಸ್ಥ ಪ್ರೊ.ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸಿ, ಶುಭಹಾರೈಸಿದರು. ವಿದ್ಯಾರ್ಥಿನಿ ಸನ ಎಚ್.ಬಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸ್ವಪ್ನ ವಂದಿಸಿದರು. ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾಲೇಜಿನ ISTE ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.