ಪವರ್‌ಸ್ಟಾರ್ ಪುನೀತ್‌ ರಾಜ್‌ಕುಮಾರ್ ನಿಧನಕ್ಕೆ ಟಿ. ಎಂ. ಶಹೀದ್ ತೆಕ್ಕಿಲ್ ಸಂತಾಪ…

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ರವರ ಅಕಾಲಿಕ ನಿಧನಕ್ಕೆ ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೇರು ನಟ ಡಾ| ರಾಜ್ ಕುಮಾರ್ ಅವರ ಪುತ್ರರಾಗಿರುವ ಪುನೀತ್ ರಾಜ್ ಕುಮಾರ್ ರವರ ನಿಧನ ಅಘಾತವನ್ನುಂಟು ಮಾಡಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ತಮ್ಮ ಸಂತಾಪದಲ್ಲಿ ತಿಳಿಸಿರುತ್ತಾರೆ.

ಟಿ. ಎಂ. ಶಹೀದ್ ತೆಕ್ಕಿಲ್ ಅವರು ಪುನೀತ್ ರಾಜ್‌ಕುಮಾರ್ ರವರ ಅಂತಿಮ ದರ್ಶನ ಪಡೆದರು.

IMG 20211030 WA0031 300x244

Related Articles