ರಾಷ್ಟೀಯ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರಿಗೆ ಕಾರ್ಯಾಗಾರ…

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಾಧನಾ ಸಭಾಭವನದಲ್ಲಿ ಅ. 30 ರಂದು ರಾಷ್ಟ್ರೀಯ ಶಿಕ್ಷಣ ನೀತಿ 2020 ಬಗ್ಗೆ ಕಾರ್ಯಾಗಾರ ನಡೆಯಿತು.
ಕಾರ್‍ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ಅಂಕಣಕಾರ ಹಾಗೂ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ರೋಹಿತ್ ಚಕ್ರತೀರ್ಥ ಮಾತನಾಡುತ್ತಾ ಒಂದು ದೇಶವು ಉತ್ತಮ ರೀತಿಯಲ್ಲಿ ಅಭಿವೃದ್ದಿ ಹೊಂದಬೇಕಾದರೆ ಅಲ್ಲಿನ ಶಿಕ್ಷಣ ವ್ಯವಸ್ಥೆ ಉತ್ತಮವಾಗಿರಬೇಕು. ಹಾಗೂ ಎಲ್ಲರಿಗೂ ಅವರ ಆಸಕ್ತಿಗನುಗುಣವಾಗಿ ಶಿಕ್ಷಣ ದೊರೆಯಬೇಕು ಎಂದರಲ್ಲದೆ ನೂತನ ಶಿಕ್ಷಣ ನೀತಿಯ ಬಗ್ಗೆ ಮಾಹಿತಿ ನೀಡಿದರು. ನಂತರದ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿ ಸಂಶಯಗಳನ್ನು ದೂರ ಮಾಡಿದರು.
ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ದೀಪ ಬೆಳಗಿಸಿ ಕಾರ್‍ಯಕ್ರಮವನ್ನು ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್, ಹಿರಿಯರಾದ ಡಾ. ಕಮಲಾ ಪ್ರ.ಭಟ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾಕೇಂದ್ರದ ಎಲ್ಲಾ ವಿಭಾಗ ಮುಖ್ಯಸ್ಥರು, ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು. ಶ್ರೀ ತಿರುಮಲೇಶ್ ಪ್ರಶಾಂತ್ ಕಾರ್ಯಕ್ರಮವನ್ನು ನಿರ್ವಹಿಸಿದರು.

WhatsApp Image 2021 10 30 At 13.06.10 300x172 WhatsApp Image 2021 10 30 At 13.06.54 300x139

Related Articles