ಒಡಿಯೂರು ಶ್ರೀಗಳ ಷಷ್ಟ್ಯಬ್ದ – ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ…

ಬಂಟ್ವಾಳ: ಒಡಿಯೂರು ಶ್ರೀಗಳ ಷಷ್ಟ್ಯಬ್ದ ಸಮಿತಿ, ಮತ್ತು ಒಡಿಯೂರು ಶ್ರೀಗಳ ಗ್ರಾಮ ವಿಕಾಸ ಯೋಜನೆ ಕಲ್ಲಡ್ಕ ವಲಯ ಆಶ್ರಯದಲ್ಲಿ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕಲ್ಲಡ್ಕ ಸಹಭಾಗಿತ್ವದಲ್ಲಿ ಸ್ವಾಮೀಜಿಯವರ ಷಷ್ಟ್ಯಬ್ದ ಅಂಗವಾಗಿ ನಡೆದ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ಭಾನುವಾರ ನಡೆಯಿತು.
ಈ ಸಂದರ್ಭ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಮಾಜಕ್ಕೆ ಅಗತ್ಯವಾದ ಕೆಲಸ ಆಗಬೇಕು. ಮಾನವೀಯತೆಯನ್ನು ಮರೆಯುತ್ತಿದ್ದೇವೆ. ಅದು ಆಗದಂತೆ ನೋಡಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು.
ಅತಿಥಿಗಳಾಗಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಒಡಿಯೂರು ಶ್ರೀ ಸೌಹಾರ್ದ ವಿವಿಧೋದ್ದೇಶ ಸಹಕಾರಿ ನಿಯಮಿತ ಅಧ್ಯಕ್ಷ ಸುರೇಶ್ ರೈ, ಷಷ್ಟ್ಯಬ್ದ ಸಂಭ್ರಮ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ಉಪಸ್ಥಿತರಿದ್ದರು. ಉದ್ಯೋಗ ತರಬೇತಿಯ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಕೃಷಿ ಮಾಹಿತಿಯನ್ನು ತಜ್ಞ ಬಾಲಸುಬ್ರಹ್ಮಣ್ಯ ಎಚ್.ಎಂ. ನೀಡಿದರು. ಸಮಿತಿ ಅಧ್ಯಕ್ಷ ರಾಧಾಕೃಷ್ಣ ಅಡ್ಯಂತಾಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಾಗೇಶ್ ಶೆಟ್ಟಿ ಬೊಂಡಾಲ, ಪ್ರಮುಖರಾದ ಷಷ್ಟ್ಯಬ್ದಿ ಸಮಿತಿ ತಾಲೂಕು ಕಾರ್ಯದರ್ಶಿ ದಿನೇಶ್ ಅಮ್ಟೂರು ಇದ್ದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

Sponsors

Related Articles

Back to top button