ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – “YEN QUEST 2021 ” ಮತ್ತು ವಿಶ್ವ ವಿಜ್ಞಾನ ದಿನಾಚರಣೆ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ದ್ವಿತೀಯ ಪಿಯುಸಿ ಮತ್ತು ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ “YEN QUEST – 2021 ” ಮತ್ತು ವಿಶ್ವ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೂಡುಬಿದ್ರಿ ರೋಟರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಸ್ಟಾನಿ ಲೋಬೊ ಮಾತನಾಡಿ, ವಿಜ್ಞಾನದ ತಿಳುವಳಿಕೆ ಓದುವುದು ಮತ್ತು ಬರೆಯುವುದಕ್ಕಿಂತ ಹೆಚ್ಚಾಗಿ ಅನುಭವಿಸುವುದರಿಂದ ಬರುತ್ತದೆ. ವಿದ್ಯಾರ್ಥಿಗಳು ಪ್ರಾಯೋಗಿಕ ಕಲಿಕೆಗೆ ಹೆಚ್ಚಿನ ಮಹತ್ವ ನೀಡಿ ತಮ್ಮ ಜ್ಞಾನವನ್ನು ವೃದ್ಧಿಸಬೇಕು. ಹೆಚ್ಚು ಹೆಚ್ಚು ಸೃಜನಶೀಲ ಕಲ್ಪನೆಗಳನ್ನು ಸಾಕಾರಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನಕ್ಕಾಗಿ ಹುಡುಕಾಟ ನಡೆಸಬೇಕು, ನಂತರ ತಾವು ಗಳಿಸಿದ ಜ್ಞಾನವನ್ನು ಇತರರಿಗೆ ಹಂಚಬೇಕು. ಸಮಾಜಕ್ಕೆ ಉಪಯೋಗವಾಗುವಂತಹ ಹೊಸ ಹೊಸ ಆವಿಷ್ಕಾರಗಳನ್ನು ಮಾಡುವಲ್ಲಿ ಆಸಕ್ತಿ ತೋರಿಸಬೇಕು ಎಂದರಲ್ಲದೆ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಉಪಸ್ಥಿತರಿದ್ದರು. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿನಿ ಶುಶುತ್ರ ಮತ್ತು ತಂಡದವರು ಪ್ರಾಥಿಸಿದರು. ಪ್ರೊ. ಸಂಗೀತ ಸ್ವಾಗತಿಸಿದರು. ಪ್ರೊ. ಲಿಖಿತ ವಂದಿಸಿದರು. ಪ್ರೊ. ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳ ಮಿನಿಪ್ರೊಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧಾ ಕಾರ್ಯಕ್ರಮ “ಯೆನ್ ಯೋಜನಾ- 2021″ ವನ್ನು ಕೂಡಾ ಆಯೋಜಿಸಲಾಗಿತ್ತು.
YEN QUEST – 2021 ” ಮತ್ತು ವಿಶ್ವ ವಿಜ್ಞಾನ ದಿನದ ಅಂಗವಾಗಿ ದ್ವಿತೀಯ ಪಿಯುಸಿ ಮತ್ತು ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ಪ್ರಾಜೆಕ್ಟ್ ಮಾಡೆಲ್, ಟ್ರೆಝರ್ ಹಂಟ್, ಪೋಸ್ಟರ್ ಪ್ರೆಸೆಂಟೇಷನ್ ಮತ್ತು ವಿಜ್ಞಾನ ರಸಪ್ರಶ್ನೆ ವಿಭಾಗಗಳಲ್ಲಿ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 250 ಕ್ಕೂ ಅಧಿಕ ಪಿಯುಸಿ ಮತ್ತು ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳು ಸಕ್ರಿಯವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸಿದರು.