ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಆಗತ ಸ್ವಾಗತ ಕಾರ್‍ಯಕ್ರಮ…

ಬಂಟ್ವಾಳ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ವಿನೂತನ ಕಾರ್‍ಯಕ್ರಮ ಆಗತ ಸ್ವಾಗತ ಕಾರ್ಯಕ್ರಮ ಮಧುಕರ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರಾದ ಶ್ರೀ ವಾಸುದೇವ ಕಾಮತ್ ಮತ್ತು ಹಿರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀಹರಿ ಹಾಗೂ ಶ್ರೀ ವಿಶ್ವಶ್ರೀ ಕ್ಷೇತ್ರ ಮಹಾಸಂಸ್ಥಾನ ಬೆಂಗಳೂರು ಇಲ್ಲಿನ ಸಂಸ್ಥಾಪಕ ಧರ್ಮಾಧಿಕಾರಿಗಳಾದ ಉಮೇಶ ಶರ್ಮ ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಮಾತನಾಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತಿಳಿಸುತ್ತಾ ರಾಷ್ಟ್ರೀಯ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕವನ್ನು ಪಡೆದ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ವೆನಿಲ್ಲಾ ಮಣಿಕಂಠ ಇವರಿಗೆ ಶಾಲು ಹೊದಿಸಿ, ಆರ್ಥಿಕ ನೆರವು ನೀಡಿ ಸನ್ಮಾನಿಸಲಾಯಿತು.
ನೂತನವಾಗಿ ಸೇರ್ಪಡೆಗೊಂಡ ಎಲ್ಲಾ ವಿದ್ಯಾರ್ಥಿಗಳು ಘೃತಾಹುತಿ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದರು. ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತಮಾಧವ, ಸಹಸಂಚಾಲಕರಾದ ಶ್ರೀ ರಮೇಶ್ ಎನ್, ಡಾ ಕಮಲಾ ಪ್ರಭಾಕರ ಭಟ್ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶಾಂಭವಿ ಮಾತಾಜಿ ಹಾಗೂ ಎಲ್ಲಾ ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು.

Sponsors

Related Articles

Back to top button