ಪ್ರಜ್ಞಾಹೀನ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ ವೃತ್ತಿಪರತೆ ಹಾಗು ಮಾನವೀಯತೆ ಮೆರೆದ ಶಾಸಕ ಡಾ.ಭರತ್ ಶೆಟ್ಟಿ….

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಸುರತ್ಕಲ್ ಬಳಿ ರಸ್ತೆಯಲ್ಲಿ ಮಹಿಳೆಯೋರ್ವರು ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಕೂಡಲೇ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
ಪ್ರಜ್ಞಾಹೀನರಾಗಿ ಬಿದ್ದಿದ್ದ ಮಹಿಳೆಯನ್ನು ಕಂಡು ತನ್ನ ನಿಗದಿಪಡಿಸಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ ವೃತ್ತಿಪರತೆ ಹಾಗು ಮಾನವೀಯತೆ ಮೆರೆದ ಡಾ.ಭಾರತ್ ಶೆಟ್ಟಿಯವರ ನಡೆಯ ಬಗ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.FB IMG 1569223904304 225x300

Related Articles

Leave a Reply

Your email address will not be published. Required fields are marked *