ರಾಜ್ಯ ಮಟ್ಟದ ವಿಟಿಯು ಈಜು ಸ್ಪರ್ಧೆಯಲ್ಲಿ ಸಹ್ಯಾದ್ರಿ ಕಾಲೇಜಿನ ಮೈತ್ರಿ ಅವರಿಗೆ ಚಿನ್ನದ ಪದಕ……

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿನಿ ಮೈತ್ರಿ ಅವರು ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಸೆಪ್ಟೆಂಬರ್ 18ರಂದು ನಡೆದ ವಿ.ಟಿ.ಯು ರಾಜ್ಯ ಮಟ್ಟದ 200 ಮೀಟರ್ ಬಟರ್ ಫ್ಲೈ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು 100ಮೀ ನಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ಮೈತ್ರಿ ಅವರ ಈ ಸಾಧನೆಗೆ ಭಂಡಾರಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಮಂಜುನಾಥ ಭಂಡಾರಿ ಮತ್ತು ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲ ಡಾ. ಆರ್ ಶ್ರೀನಿವಾಸ ರಾವ್ ಕುಂಟೆ ಅಭಿನಂದನೆ ಸಲ್ಲಿಸಿದ್ದಾರೆ.Maithri Swimming 01 169x300

Related Articles

Leave a Reply

Your email address will not be published. Required fields are marked *