ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಾರ್ಯಾಗಾರ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಉತ್ತಮ ಉತ್ಪನ್ನ ವಿನ್ಯಾಸಕ್ಕಾಗಿ ಸುಧಾರಿತ ತಂತ್ರಜ್ಞಾನಗಳ ಬಳಕೆ ಎನ್ನುವ ವಿಷಯದ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಕ್ಯಾಡ್ ಸೆಂಟರ್ ಟ್ರೈನಿಂಗ್ ಸರ್ವಿಸಸ್ ಲಿಮಿಟೆಡ್ ಚೆನ್ನೈ ಇದರ ಬಿಸಿನೆಸ್ ಸಪೋರ್ಟ್ ವಿಭಾಗದ ಮುಖ್ಯಸ್ಥ ಸಂತೋಷ್ ಕುಮಾರ್ ಕೆ ಆರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳನ್ನು ಪ್ರಸಕ್ತ ಸನ್ನಿವೇಶಕ್ಕೆ ತಕ್ಕಂತೆ ತರಬೇತುಗೊಳಿಸಿ ಉದ್ಯೋಗಕ್ಕೆ ಸನ್ನದ್ಧರನ್ನಾಗಿ ಮಾಡುವ ನೂತನ ಸುಧಾರಿತ ಸಾಫ್ಟ್‍ವೇರ್ ಗಳ ಬಳಕೆಯ ಬಗ್ಗೆ ಅವರು ಮಾಹಿತಿ ನೀಡಿದರು. ಮಾರುಕಟ್ಟೆ ಕ್ಷೇತ್ರದಲ್ಲಿ ಸಾಫ್ಟ್‍ವೇರ್‍ಗಳ ವ್ಯಾಪಕ ಬಳಕೆಯಿಂದ ಮುಂಬರುವ ದಿನಗಳಲ್ಲಿ ಉಂಟಾಗುವ ಅವಕಾಶಗಳ ಬಗ್ಗೆ ಸಂವಾದ ನಡೆಸಲಾಯಿತು.
ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಸಂಯೋಜಕರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಚರಣ್ ಕೆ ಆರ್ ಸ್ವಾಗತಿಸಿ, ಯಶ್ವಿತ್ ವಂದಿಸಿದರು.