ವಿಧಾನ ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ…

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ದಕ್ಷಿಣ ಕನ್ನಡದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಅವರನ್ನು ಘೋಷಿಸಲಾಗಿದ್ದು, ಅವರು ಇಂದು ನಾಮಪತ್ರ ಸಲ್ಲಿಸಿದರು.
ಮಂಜುನಾಥ ಭಂಡಾರಿಯವರು ಶಾಲಾ ಮತ್ತು ಕಾಲೇಜಿನ ಆರಂಭಿಕ ವಿದ್ಯಾರ್ಥಿ ದಿನಗಳಲ್ಲಿ ನಾಯಕತ್ವ ಗುಣವನ್ನು ಹೊಂದಿದ್ದರು. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡ ಅವರು ವಿವಿಧ ಚಟುವಟಿಕೆಗಳ ಮೂಲಕ ಜಾಗತಿಕ ವೇದಿಕೆಯಲ್ಲಿ ಯುವ ಐಕಾನ್ ಆಗಿ ಪರಿಗಣಿಸಲ್ಪಟ್ಟರು.
ಮೂರುವರೆ ದಶಕಗಳಿಗೂ ಹೆಚ್ಚು ಕಾಲ ರಾಜಕೀಯದಲ್ಲಿ ಆಳವಾಗಿ ತೊಡಗಿಸಿಕೊಂಡಿರುವ ಮಂಜುನಾಥ ಭಂಡಾರಿ ಅವರು 2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಲೋಕಸಭೆಗೆ ಸ್ಪರ್ಧಿಸಿದ್ದರು. ರಾಜಕೀಯ ನಾಯಕರಾಗಿ ಪಕ್ಷ ಮತ್ತು ದೇಶವನ್ನು ಪ್ರತಿನಿಧಿಸಿ ಅವರು ವಿಶ್ವದಾದ್ಯಂತ ಸಂಚರಿಸಿ ರಾಷ್ಟ್ರಪತಿ, ಪ್ರಧಾನಮಂತ್ರಿಗಳಂತಹ ಉನ್ನತ ರಾಜಕೀಯ ನಾಯಕರೊಂದಿಗೆ ಸಂವಾದ ನಡೆಸಿದ ಅನುಭವ ಹೊಂದಿದ್ದಾರೆ. ಮಂತ್ರಿಗಳು, CEO ಗಳು ಮತ್ತು ಇತರ ಸಾಮಾಜಿಕ ಮತ್ತು ವ್ಯಾಪಾರ ಉದ್ಯಮಿಗಳೊಂದಿಗೆ ನಿಕಟ ಸಂಪರ್ಕವನ್ನೂ ಅವರು ಹೊಂದಿದ್ದಾರೆ.
ಎಂಜಿನಿಯರಿಂಗ್ ಹಿನ್ನೆಲೆ ಹೊಂದಿರುವ ಮಂಜುನಾಥ ಭಂಡಾರಿ ಅವರು ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ರಾಜ್ಯಶಾಸ್ತ್ರದಲ್ಲಿ ಎಂಎ ಮತ್ತು ಎಂಫಿಲ್, ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ.

Sponsors

Related Articles

Back to top button