ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಸಾವು….

ಮಂಗಳೂರು: ಕೊರೊನಾ ಸೋಂಕಿನಿಂದ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಲಶೇಖರದ 80ರ ವೃದ್ಧೆ ಗುರುವಾರ ಮೃತಪಟ್ಟಿದ್ದಾರೆ.
ಮಂಗಳೂರು ಫಸ್ಟ್ ನ್ಯೂರೋ ಸಂಪರ್ಕದಿಂದ ಇವರಿಗೆ ಕೊರೊನಾ ಸೊಂಕು ತಗುಲಿತ್ತು, ನಂತರ ಅವರನ್ನು ಮಂಗಳೂರಿನ ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಇವರ ಆರೋಗ್ಯ ಸ್ಥಿತಿ ಕೂಡ ಗಂಭೀರವಾಗಿದ್ದು, ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಒಟ್ಟು 5 ಜನ ಮೃತಪಟ್ಟಂತಾಗಿದೆ.

Related Articles

Back to top button