ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – VTU ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟ…

ಪುತ್ತೂರು: ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯ. ವಾಲಿಬಾಲ್‍ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯುವುದು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಆಟವನ್ನು ಕ್ರೀಡಾಸ್ಪೂರ್ತಿಯಿಂದ ಆಡಬೇಕು ಮತ್ತು ಅಲ್ಲಿನ ಘಟನೆಗಳನ್ನು ಕ್ರೀಡಾಂಗಣದಿಂದ ಹೊರ ಹೋಗುವಾಗ ಮರೆತುಬಿಡಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಕ್ರೀಡೆಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ದೈಹಿಕ ಸ್ಥಿರತೆಯನ್ನು ನೀಡುವಲ್ಲಿ ಸಹಕಾರಿಯಾಗಿದೆ. ತನ್ಮೂಲಕ ಶಾರೀರಿಕ ದೃಢತೆ ಮತ್ತು ಆತ್ಮವಿಶ್ವಾಸವನ್ನು ಇದು ಹೆಚ್ಚಿಸುತ್ತದೆ ಎಂದರು.
ಕಾಲೇಜು ಆಡಳಿತ ಮಂಡಳೀಯ ನಿರ್ದೇಶಕ ಸತ್ಯನಾರಾಯಣ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು
ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಸಮಾರಂಭದಲ್ಲಿ ಹಾಜರಿದ್ದರು.
ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 14 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಉಪನ್ಯಾಸಕ ಪ್ರೊ.ವಿನಯ್.ಪಿ ವಂದಿಸಿದರು. ದಿಶಾ.ಎಸ್ ಕಾರ್ಯಕ್ರಮ ನಿರ್ವಹಿಸಿದರು.

Volleyball2 300x194

Volleyball5 300x223 Volleyball4 300x221 Volleyball3 300x186

Related Articles