ದ. 12 – ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ…

ಬಂಟ್ವಾಳ: ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ ಸಮಾರಂಭವು ದ.12 ರಂದು ಬಿ.ಸಿ.ರೋಡಿನ ತಾಲೂಕು ಕನ್ನಡ ಭವನದಲ್ಲಿ ಅಪರಾಹ್ನ 3 ಗಂಟೆಗೆ ಜರಗಲಿದೆ.
ಹಿರಿಯ ವಿದ್ವಾಂಸ ಪರಂಪರೆಯ ಕೊಂಡಿಯಾಗಿರುವ ಪಾದೆಕಲ್ಲು ವಿಷ್ಣು ಭಟ್ಟರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ. ಅಭಿನಂದನಾ ಭಾಷಣವನ್ನು ವಿದ್ವಾನ್ ವೆಂಕಟೇಶ್ವರ ಭಟ್ ಹಿರಣ್ಯ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಭೀಮ ಭಟ್ಟರ ಸಂಸ್ಮರಣೆ ಕಾರ್ಯಕ್ರಮ ಜರಗಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಮ್.ಪಿ. ಶ್ರೀನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಾಜಿಸಚಿವ ಬಿ.ರಮಾನಾಥ ರೈ, ತಾ.ಪಂ ಉಪಾಧ್ಯಕ್ಷ ಬಿ.ಎಮ್. ಅಬ್ಬಾಸ್ ಆಲಿ ಭಾಗವಹಿಸಲಿದ್ದಾರೆ.
ಸ್ವಾಗತ ಸಮಿತಿ ಸಭೆಯು ಬಿ.ಸಿ.ರೋಡಿನಲ್ಲಿ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆಯಲ್ಲಿ ಗುರುವಾರ ಕನ್ನಡ ಭವನದಲ್ಲಿ ಪೂರ್ವಭಾವಿ ಸಭೆ ಜರಗಿತು. ಕೋಶಾಧಿಕಾರಿ ಕೊಳಕೆ ಗಂಗಾಧರ ಭಟ್ , ಕ.ಸಾ.ಪ. ಅಧ್ಯಕ್ಷ ಮೋಹನ್ ರಾವ್, ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ , ಶಿವಶಂಕರ್, ಸೀತಾರಾಮ ಶೆಟ್ಟಿ , ಅಬ್ದುಲ್ ರಹಿಮಾನ್ ಡಿ.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Back to top button