ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು- ವಿಚಾರಗೋಷ್ಠಿ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗ ಮತ್ತು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಸಂಶೋಧನೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿ ಎನ್ನುವ ವಿಷಯದ ಬಗ್ಗೆ ವಿಚಾರಗೋಷ್ಠಿಯನ್ನು ಶ್ರೀ ರಾಮ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು.
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಪೂರ್ವ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶ್ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ನಡೆಯುವ ನೂತನ ಆವಿಷ್ಕಾರಗಳ ಬಗ್ಗೆ ಅವರು ಬೆಳಕು ಚೆಲ್ಲಿದರು. ರಕ್ಷಣಾ ಕ್ಷೇತ್ರದಲ್ಲಿ, ಬಾಹ್ಯಾಕಾಶ ಕಾರ್ಯಕ್ರಮಗಳಲ್ಲಿ ಮತ್ತು ಸಾರ್ವಜನಿಕ ಉದ್ಯಮ ಕಂಪೆನಿಗಳಲ್ಲಿ ಇರುವ ವೃತ್ತಿ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಐಎಸ್‍ಟಿಇ ಸಹ ಸಂಯೋಜಕರಾದ ರ್ಪೋ.ನವೀನ್.ಸಿ ವಿ ಮತ್ತು ಪ್ರೊ.ರಾಘವೇಂದ್ರ ಪ್ರಸಾದ್ ಎಸ್ ಎ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜಿನ ಐಎಸ್‍ಟಿಇ ಸಂಯೋಜಕ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಸ್ವಾಗತಿಸಿ, ವಂದಿಸಿದರು.