ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – IEEE ವಿದ್ಯಾರ್ಥಿ ಶಾಖೆ ಉದ್ಘಾಟನೆ…
ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ IEEE ವಿದ್ಯಾರ್ಥಿ ಶಾಖೆಯ ಉದ್ಘಾಟನೆ. ಡಿ. 4 ರಂದು ನಡೆಯಿತು.
IEEE ಮಂಗಳೂರು ಉಪವಿಭಾಗದ ಅಧ್ಯಕ್ಷ ಡಾ. ಪುಷ್ಪರಾಜ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, IEEE ಸಂಸ್ಥೆ ಮತ್ತು IEEE ಮಂಗಳೂರು ಉಪವಿಭಾಗದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅವರು IEEE ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಪ್ರಯೋಜನಗಳ ಬಗ್ಗೆ ತಿಳಿಸಿದರಲ್ಲದೆ, IEEE ಮಂಗಳೂರು ಉಪವಿಭಾಗದ ಹೆಚ್ಚಿನ ಬೆಂಬಲವನ್ನು ಕೋರಿದರು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಉಪಸ್ಥಿತರಿದ್ದರು.
IEEE ಮಂಗಳೂರು ಉಪವಿಭಾಗದ ಕಾರ್ಯದರ್ಶಿ ಡಾ. ಹೋಹಿತ್ ಬಿ ತಹಿಲಿಯಾನಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸ್ವಯಂಸೇವಕ ಅವಕಾಶಗಳ ಪರಿಣಾಮಕಾರಿ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರಸನ್ನ ಕುಮಾರ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಗಂಗಾಧರ, ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗ ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗ ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪ್ರೊ. ಜಯಶ್ರೀ ಸ್ವಾಗತಿಸಿದರು. ಪ್ರೊ. ರೆಬೇಕ ಫೆರ್ನಾಂಡಿಸ್ ಅತಿಥಿಗಳ ಪರಿಚಯ ಮಾಡಿದರು. ಪ್ರೊ. ನಾಝಿಯಾ ಅಬ್ದುಲ್ ಮಜೀದ್ ಕಾರ್ಯಕ್ರಮ ನಿರೂಪಿಸಿದರು. ಚೇತನ್ ವಂದಿಸಿದರು.