ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮ್ಮಾಜೆ – ವೃತ್ತಿ ತರಬೇತಿ ಕಾರ್ಯಕ್ರಮ…
ಬಂಟ್ವಾಳ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಕೌಶಲ್ಯಗಳನ್ನು ಬೆಳೆಸಿ ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಅತ್ಯುತ್ತಮ ಉದ್ಯೋಗಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ನೋಸ್ಯಾಟ್ ಲರ್ನಿಂಗ್ ಸೊಲ್ಯೂಷನ್ಸ್ ಸಂಸ್ಥೆಯ ನಿರ್ದೇಶಕ ಅಭಿಷೇಕ್ ಶೆಟ್ಟಿ ಹೇಳಿದರು.
ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇಲ್ಲಿ ನಡೆದ ಒಂದು ದಿನದ ಉದ್ಯೋಗ ಕೌಶಲ್ಯ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ವಿವಿದ ಪರೀಕ್ಷೆಗಳ ಬಗ್ಗೆ ವಿಶೇಷ ಮಾಹಿತಿ ತರಬೇತಿ ನೀಡಿದರು. ಇದೇ ಸಂದರ್ಭ ನೋ ಸ್ಯಾಟ್ ಸಂಸ್ಥೆ ಹಾಗೂ ಕಾಲೇಜಿನ ನಡುವೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕುರಿತು ಒಡಂಬಡಿಕೆ ನಡೆಯಿತು.
ವೇದಿಕೆಯಲ್ಲಿ ತರಬೇತಿ ಸಂಸ್ಥೆಯ ಮಾರ್ಕೆಟಿಂಗ್ ಮುಖ್ಯಸ್ಥ ಸುಜಿತ್ ಕುಮಾರ್ ಉಪಸ್ಥಿತರಿದ್ದರು.
ಕಾಲೇಜಿನ ಐ ಕ್ಯು ಏ ಸಿ ಘಟಕದ ಮುಖ್ಯಸ್ಥ ನಂದಕಿಶೋರ್ ಎಸ್ ಕಾರ್ಯಕ್ರಮ ಸಂಯೋಜಿಸಿ, ಪ್ರಾಂಶುಪಾಲ ಪ್ರೊ ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು.