ಮಂಗಳೂರು – ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ…

ಮಂಗಳೂರು: ಕಾಂಗ್ರೆಸ್ ಪಕ್ಷದ ಎರಡನೇ ಹಂತದ ಸದಸ್ಯತ್ವ ಅಭಿಯಾನದ ಅಂಗವಾಗಿ ಶ್ರೀ ಮಂಜುನಾಥ್ ಭಂಡಾರಿಯವರು ಮಂಗಳೂರಿನ ಕದ್ರಿ ದಕ್ಷಿಣ ವಾರ್ಡಿನ ಬೂತ್ ಸಂಖ್ಯೆ 60ರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದು ಇನ್ನಿತರರಿಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಹರೀಶ್ ಕುಮಾರ್, ಮಾಜಿ ಕಾರ್ಪೂರೇಟರ್ ಶ್ರೀ ಅಶೋಕ್ ಡಿ ಕೆ, ಶ್ರೀ ಮೋಹನ್ ಮುಂತಾದವರು ಉಪಸ್ಥಿತರಿದ್ದರು.