ವಿಧಾನ ಪರಿಷತ್‌ನ ಚುನಾವಣೆ – ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ ಗೆಲುವು…

ಮಂಗಳೂರು: ವಿಧಾನ ಪರಿಷತ್‌ನ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವು ಸಾಧಿಸಿದ್ದಾರೆ.
ಇಬ್ಬರು ಅಭ್ಯರ್ಥಿಗಳು ಪ್ರಥಮ ಪ್ರಾಶಸ್ಯದ ಮತ ಪಡೆದು ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕೋಟ ಶ್ರೀನಿವಾಸ ಪೂಜಾರಿ 3672 ಮತ, ಮಂಜುನಾಥ ಭಂಡಾರಿ 2079 ಮತಗಳನ್ನು ಪಡೆದು ಗೆಲುವು ಪಡೆದು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರಿಗೆ 204 ಮತಗಳು ದೊರೆತಿದೆ. 58 ಮತಗಳು ತಿರಸ್ಕೃತಗೊಂಡಿದೆ ಎಂದು ತಿಳಿದು ಬಂದಿದೆ.