ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೇಸ್ ಅಭ್ಯರ್ಥಿಗಳಿಗೆ ಟಿ. ಎಂ. ಶಹೀದ್ ತೆಕ್ಕಿಲ್ ಅಭಿನಂಧನೆ…

ಸುಳ್ಯ: ಕರ್ನಾಟಕದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಹಾವೇರಿ, ಗದಗ, ಧಾರವಾಡ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್, ಉಡುಪಿ-ದ.ಕ. ಜಿಲ್ಲೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಹಾಗೂ ವಿಜೇತರಾದ ಇತರ ಎಲ್ಲಾ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳಿಗೆ ಕಾಂಗ್ರೇಸ್ ಮುಖಂಡ, ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಕೆಪಿಸಿಸಿ ವೀಕ್ಷಕರಾದ ಟಿ. ಎಂ. ಶಹೀದ್ ತೆಕ್ಕಿಲ್ ರವರು ಅಭಿನಂಧನೆ ಸಲ್ಲಿಸಿದ್ದಾರೆ.
ಈ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಹನ್ನೊಂದಕ್ಕೂ ಮಿಕ್ಕಿ ಸ್ಥಾನಗಳಿಸಿದ್ದು, ಕರ್ನಾಟಕದ ಜನತೆ ಕಾಂಗ್ರೇಸ್ ಪಕ್ಷದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರವನ್ನು ಪಡೆಯಲಿದೆ ಎಂದು ಟಿ. ಎಂ. ಶಹೀದ್ ತೆಕ್ಕಿಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Articles

Back to top button