ಕರ್ನಾಟಕ ವಿಧಾನ ಪರಿಷತ್ ಗೆ ಆಯ್ಕೆ – ಮಂಜುನಾಥ ಭಂಡಾರಿ ಅವರಿಂದ ಕೃತಜ್ಞತೆ ಸಲ್ಲಿಕೆ…

ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿ ಅವರು ಮತದಾರರಿಗೆ, ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯನಾಗಿ ಆರಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು.
ನನ್ನ ಮೇಲೆ ಅಭಿಮಾನ ಮತ್ತು ನಂಬಿಕೆ ಇಟ್ಟು ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ನನ್ನ ಗೆಲುವಿಗೆ ಸಹಕರಿಸಿದ ಪಕ್ಷದ ಎಲ್ಲಾ ನಾಯಕರುಗಳಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಾಯಕರು ನನ್ನ ಮೇಲಿಟ್ಟ ನಂಬಿಕೆ ಮತ್ತು ಅಭಿಮಾನ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಒಗ್ಗೂಡಿ ಕೆಲಸ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ.
ಈ ಚುನಾವಣೆಯಲ್ಲಿ ಅಹರ್ನಿಶಿಯಾಗಿ ದುಡಿದು ಪಕ್ಷದ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ನನ್ನ ಹಾರ್ದಿಕ ಕೃತಜ್ಞತೆಗಳು.ನಿಮ್ಮ ಪ್ರೀತಿ, ವಿಶ್ವಾಸ ನನ್ನ ಮುಂದಿನ ದಿನಗಳ ಯೋಜನೆಗಳಲ್ಲೂ ಇರಲಿ. ಆ ಮೂಲಕ ನಾವೆಲ್ಲರೂ ಒಗ್ಗೂಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸೋಣ ಎಂದು ಮಂಜುನಾಥ ಭಂಡಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button