ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲಪಾದೆ – ಅಷ್ಠಬಂಧ ಬ್ರಹ್ಮಕಲಶೋತ್ಸವದ ಧರ್ಮಸಭೆ…
ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲಪಾದೆ ಸಜೀಪಮುನ್ನೂರು ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವದ ಧರ್ಮಸಭೆ ದೇವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಆಶೀರ್ವಾದದೊಂದಿಗೆ ಆರಂಭವಾಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಸಜೀಪ ಮಾಗಣಿ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ತು ಬಂಟ್ವಾಳ ತಾಲೂಕು ಅಧ್ಯಕ್ಷ ವೇದಮೂರ್ತಿ ಎನ್ ಶಿವರಾಮ ಮಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯಕೆ ರವೀಂದ್ರ ಕಂಬಳಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಡಿ, ಬಾಲ ಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ, ಮುಂಡಪ್ಪ ಶೆಟ್ಟಿ ಯಾನೆ ಕೋಚು ಭಂಡಾರಿ, ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ರಾಧಾಕೃಷ್ಣ ಆಳ್ವ, ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ, ಡಾಕ್ಟರ್ ಎನ್ ಜಯಪ್ರಕಾಶ್ ಮಯ್ಯ, ಪ್ರೇಮ ಜಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.