ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್…

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ನಾಡಿನ ಆಸ್ತಿಪಾಸ್ತಿ ಮೇಲೆ ಎಂಇಎಸ್ ದಬ್ಬಾಳಿಕೆಯನ್ನು ಖಂಡಿಸಿ,ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ. 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.

Related Articles

Back to top button