ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ…

ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟಗಳ ಉದ್ಘಾಟನೆ ಇಂದು ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ಕರ್ನಾಟಕದ ಸಂತೋಷ್ ಟ್ರೋಫಿ ಆಟಗಾರರಾದ ಬಾವು ನಿಶಾದ್ ಮತ್ತು ರಿಯಾಜ್ ಪಿ ಟಿ ನೆರವೇರಿಸಿ, ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಲೋಕೇಶ್ ವಂದಿಸಿದರು. ವಿದ್ಯಾರ್ಥಿನಿ ಕಾತ್ಯಾಯಿನಿ ಅನಿಲ್ ನಾಥ್ ಸಿಂಗ್ ಕಾರ್ಯಕ್ರಮ ನಿರೂಪಿಸಿದರು.
ಮೂಡಬಿದ್ರೆಯ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಸುಸಜ್ಜಿತ ಫುಟ್ ಬಾಲ್ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಾಟದಲ್ಲಿ ಮಂಗಳೂರು ವಲಯದ 17 ತಾಂತ್ರಿಕ ಮಹಾವಿದ್ಯಾಲಯಗಳ ಬಾಲಕರ ತಂಡಗಳು ಪಾಲ್ಗೊಂಡಿವೆ.

DSC 8934 300x200

DSC 8960 300x200

DSC 8932 300x200

DSC 8981 300x200

DSC 8980 300x200

Related Articles