ವಿಟಿಯು ಮಂಗಳೂರು ವಲಯದ ಫುಟ್ ಬಾಲ್ ಪಂದ್ಯಾಟ – ನಿಟ್ಟೆ ಪ್ರಥಮ, ಬ್ಯಾರೀಸ್ ದ್ವಿತೀಯ…

ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಆತಿಥ್ಯದಲ್ಲಿ ಡಿ. 27 ಮತ್ತು 28 ರಂದು ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯದ ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ಎನ್ಎಂಎಎಂಐಟಿ ನಿಟ್ಟೆ ತಂಡ ಪ್ರಥಮ ಸ್ಥಾನ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಪ್ರೊ. ಶ್ರೀನಿವಾಸ್ ಎರಡು ದಿನಗಳ ಕಾಲ ನಡೆದ ಫುಟ್ ಬಾಲ್ ಪಂದ್ಯಾಟಗಳ ವರದಿ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಲೋಕೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕಾತ್ಯಾಯಿನಿ ಅನಿಲ್ ನಾಥ್ ಸಿಂಗ್ ಕಾರ್ಯಕ್ರಮ ನಿರೂಪಿಸಿದರು.
ಮೂಡಬಿದ್ರೆಯ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಸುಸಜ್ಜಿತ ಫುಟ್ ಬಾಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯಾಟದಲ್ಲಿ ಮಂಗಳೂರು ವಲಯದ 17 ತಾಂತ್ರಿಕ ಮಹಾವಿದ್ಯಾಲಯಗಳ ಬಾಲಕರ ತಂಡಗಳು ಪಾಲ್ಗೊಂಡಿದ್ದವು.

IMG 20211229 WA0005 300x200

Related Articles