ಸುದ್ದಿ
ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಭೆ……..
ಬಂಟ್ವಾಳ :ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕಿನ ಸರ್ವ ಸದಸ್ಯರ ಸಭೆ ತಾಲೂಕು ಯೋಜನಾ ಕಛೇರಿಯಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ವಹಿಸಿದ್ದರು. ಅಕ್ಟೋಬರ್ ತಿಂಗಳ 2ನೇ ತಾರೀಕು ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ಗಾಂಧಿಜಯಂತಿ ಪ್ರಯುಕ್ತ ನಡೆಯಲಿರುವ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ವ್ಯಸನಮುಕ್ತರ ಸಮಾವೇಶ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮಾಜಿ ಶಾಸಕ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರುಕ್ಮಯ ಪೂಜಾರಿ, ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ನಿಕಟಪೂರ್ವಾಧ್ಯಕ್ಷ ಪ್ರಕಾಶ್ ಕಾರಂತ, ಯೋಜನಾಧಿಕಾರಿಗಳಾದ ಜಯಾನಂದ. ಪಿ, ಮೋಹನ್. ಕೆ, ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾಧವ ವಳವೂರು, ಜನಜಾಗೃತಿ ವಲಯಾಧ್ಯಕ್ಷ ರೊನಾಲ್ಡ್ ಡಿ’ಸೋಜಾ, ವಲಯಾಧ್ಯಕ್ಷರು, ಸದಸ್ಯರು ಮತ್ತು ಮೇಲ್ವಿಚಾರಕರು ಉಪಸ್ಥಿತರಿದ್ದರು.
Advertisement