ಕೋಟ ಡಿ ಜೆ ಪ್ರಕರಣ- ಮಂಜುನಾಥ್ ಭಂಡಾರಿಯವರಿಂದ ಸಾಂತ್ವನ…

ಉಡುಪಿ: ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ ಮೆಹಂದಿ ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ. ಈ ಘಟನೆಯಿಂದ ನೊಂದ ಕೊರಗ ಪರಿವಾರದ ಮನೆಗೆ ವಿಧಾನಪರಿಷತ್ತಿ ಗೆ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀ ಮಂಜುನಾಥ್ ಭಂಡಾರಿಯವರು ಭೇಟಿ ನೀಡಿ ಸಾಂತ್ವನದ ಮಾತುಗಳನ್ನಾಡಿ ಘಟನೆಯಿಂದ ನೊಂದ ಪರಿವಾರಕ್ಕೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ನಂತರ ಉಡುಪಿ ಜಿಲ್ಲಾ ಪೋಲಿಸ್ ಕಛೇರಿಗೆ ಭೇಟಿ ನೀಡಿ ಘಟನೆಯ ಬಗ್ಗೆ ಸರಿಯಾಗಿ ಪರಿಶೀಲಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕಾಗಿ ಪೋಲಿಸ್ ಆಯುಕ್ತರಲ್ಲಿ ವಿನಂತಿಸಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button