ಪ್ರಧಾನಿ ನರೇಂದ್ರ ಮೋದಿ ಅವರ ಆಯುಷ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮ…

ಬಂಟ್ವಾಳ: ಬಂಟ್ವಾಳ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ- ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಹಾಗೂ ಪಕ್ಷದ ವಿವಿಧ ಜವಾಬ್ದಾರಿ ಇರುವ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

0045e965 7d4c 4c62 8d02 Bfa1ab382ee7 300x200

Related Articles