ತೆಕ್ಕಿಲ್ ಮಾದರಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಟಿ.ಎಂ.ಶಹೀದ್ ರವರ ಜನ್ಮದಿನದ ಸರಳ ಆಚರಣೆ…

ಸುಳ್ಯ: ಬದುಕಿನ ಸುವರ್ಣ ವರ್ಷಗಳನ್ನು ಸಮಾಜ ಸೇವೆಯೊಂದಿಗೆ ಗುರುತಿಸಿಕೊಂಡ ತೆಕ್ಕಿಲ್ ಮಾದರಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಟಿ.ಎಂ.ಶಹೀದ್ ರವರ ಜನ್ಮದಿನವನ್ನು ಸಂಸ್ಥೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ದಿನಕರ ಸಣ್ಣಮನೆಯವರ ಅಧ್ಯಕ್ಷತೆಯೊಂದಿಗೆ ಕೇಕ್ ಕತ್ತರಿಸಿ ವಿದ್ಯಾರ್ಥಿಗಳೆಲ್ಲರಿಗೂ ಹಂಚಲಾಯತು. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀಅಶ್ರಫ್ ಗುಂಡಿಯವರು ಶಹೀದ್ ರವರ ಸುವರ್ಣ ಸಾಧನೆಗಳನ್ನು ವಿದ್ಯಾರ್ಥಿ ಸಮೂಹಕ್ಕೆ ತಿಳಿಸಿದರು. ಅಧ್ಯಕ್ಷರಾದ ಶ್ರೀ ದಿನಕರ ಸಣ್ಣಮನೆಯವರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡುತ್ತಾ ಶ್ರೀಯುತರ ಸಾಧನೆಗಳು ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದಂತದ್ದು, ವಿದ್ಯಾರ್ಥಿಗಳೆಲ್ಲರಿಗೂ ಮಾದರಿ ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ತೆಕ್ಕಿಲ್ ಗ್ಯಾಸ್ ಏಜೆನ್ಸಿಯ ಶ್ರೀ ಧನುರಾಜ್ ಊರುಪಂಜ, ಸರ್ವ ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ ಕೆ ಸ್ವಾಗತಿಸಿ, ವಂದಿಸಿದರು.
ವಿದ್ಯಾರ್ಥಿಗಳೆಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಲಾಯಿತು.