ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ.ಪಾಟೀಲ್ – ಟಿ. ಎಂ.ಶಹೀದ್ ತೆಕ್ಕಿಲ್ ಅಭಿನಂದನೆ…

ಬೆಂಗಳೂರು:ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ. ಬಿ. ಪಾಟೀಲ್ ರನ್ನು ನೇಮಕಗೊಳಿಸಿರುವುದನ್ನು ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಟಿ.ಎಂ.ಶಹೀದ್ ತೆಕ್ಕಿಲ್ ಸ್ವಾಗತಿಸಿದ್ದಾರೆ.
ಕಾಂಗ್ರೇಸ್ ಪಕ್ಷದ ನಿಷ್ಠಾವಂತರಾಗಿರುವ ಇವರ ನಾಯಕತ್ವದಲ್ಲಿ ಪಕ್ಷವು ಬಲಿಷ್ಠಗೊಂಡು ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯಲಿ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಹಾರೈಸಿರುತ್ತಾರೆ. ನೇಮಕಗೊಳಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನೆ ಸಲ್ಲಿಸಿದ್ದಾರೆ.
ಟಿ.ಎಂ.ಶಹೀದ್ ತೆಕ್ಕಿಲ್