ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ…

ಬಂಟ್ವಾಳ: ಅಂದಾಜು ಎರಡು ಕೋಟಿ ರೂಪಾಯಿಗಳ ಅಧಿಕ ವೆಚ್ಚದಲ್ಲಿ ಶಿಲಾಮಯ ಗರ್ಭಗುಡಿ, ತೀರ್ಥ ಮಂಟಪ, ಸುತ್ತುಪೌಳಿ ವಾಸ್ತು ಪ್ರಕಾರ ಪುನರ್ ನಿರ್ಮಾಣಗೊಂಡು ಫೆಬ್ರವರಿ 9 ರಿಂದ 14ರ ತನಕ ನವೀಕರಣ ಪುನಃಪ್ರತಿಷ್ಠಾಪನೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಕೆ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಜರಗಲಿದ್ದು, ಆ ಪ್ರಯುಕ್ತ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ದೇವಸ್ಥಾನಕ್ಕೆ ಆಗಮಿಸಿ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಿದ್ಧತೆ ಸಭೆಯನ್ನು ತಾಲೂಕಿನ ಎಲ್ಲಾ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನಡೆಸಿಕೊಟ್ಟರು.
ಕಂದಾಯ, ಪೊಲೀಸ್, ವಿದ್ಯುತ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ದೇವಾಲಯದ ಪ್ರಮುಖರು ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರವೀಂದ್ರನಾಥ್ ಭಂಡಾರಿ ಪುಣ್ಕೆ ಮಜಲು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮಮತಾ ಎಸ್ ಗಟ್ಟಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button