ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ತಾಂತ್ರಿಕ ಕಾರ್ಯಾಗಾರ…
ಮೂಡಬಿದ್ರಿ: ಇಲ್ಲಿನ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವತಿಯಿಂದ ಆಯೋಜಿಸಲಾಗಿರುವ “ಪಿಸಿಬಿ ಡಿಸೈನಿಂಗ್ ” ವಿಷಯದ ಕುರಿತಾದ 3 ದಿನಗಳ ತಾಂತ್ರಿಕ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಫೆ. 16 ರಂದು ನಡೆಯಿತು.
IEEE ಹಾಗೂ ISTE ಸಹಯೋಗದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಹೈದರಾಬಾದ್ ನ ಕ್ಲೋನೆಕ್ ಆಟೋಮೇಷನ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಟೆಕ್ನಿಕಲ್ ಕನ್ಸಲ್ಟೆಂಟ್ ಶ್ರೀ ರಾಘವೇಂದ್ರ ಪ್ರಭು ಭಾಗವಹಿಸಿದ್ದರು. ವಿಭಾಗ ಮುಖ್ಯಸ್ಥ ಪ್ರೊ. ಪ್ರಸನ್ನ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮೂರನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಪ್ರೊ. ಪ್ರವೀಣ್ ಜಿ.ಬಿ ಮತ್ತು ಪ್ರೊ ಅಕ್ಷತಾ ಕಾರ್ಯಗಾರವನ್ನು ಸಂಯೋಜಿಸಿದ್ದರು. ಪ್ರೊ.ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿದರು.