ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ ಭೇಟಿ…

ಸುಳ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರಾದ ದ್ರುವನಾರಾಯಣರವರು ಫೆ.21ರಂದು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಭೇಟಿ ನೀಡಿ ಸಂಸ್ಥೆಯ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ವತಿಯಿಂದ ಟಿ.ಎಂ.ಶಹೀದ್ ತೆಕ್ಕಿಲ್‌ರವರ ತಂದೆ ಟಿ.ಎಂ.ಬಾಬಾ ಹಾಜಿ ತೆಕ್ಕಿಲ್ ಹಾಗೂ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಅರಂತೋಡು ತಾಲೂಕು ಪಂಚಾಯತ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ರಹೀಂ ಬೀಜದಕಟ್ಟೆ, ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ರಿಯಾಝ್ ಕಲ್ಲುಗುಂಡಿ, ಉನೈಸ್ ಗೂನಡ್ಕ, ಅಯ್ಯಾಬ್ ಚೆರೂರ್, ಇಬ್ರಾಹಿಂ ದರ್ಖಾಸ್ತು ಮೊದಲಾದವರು ಉಪಸ್ಥಿತರಿದ್ದರು.

474e70df F17a 43e7 Beea Fb1e54857a69 225x300

Related Articles