ಉಳ್ಳಾಲ ಉರೂಸ್ ಸಮಾಜಕ್ಕೆ ಮಾದರಿ- ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್…
ಮಂಗಳೂರು: ಇತಿಹಾಸ ಪ್ರಸಿದ್ಧವಾದ ಉಳ್ಳಾಲ ಸಯ್ಯದ್ ಮದನಿ ದರ್ಗಾ ಷರೀಫ್ ಉರೂಸ್ ನಲ್ಲಿ ಎಲ್ಲ ಜಾತಿ-ಧರ್ಮದವರನ್ನು ಕರೆಸಿ, ಐಕ್ಯದಿಂದ ಅತ್ಯಂತ ಶಿಸ್ತುಬದ್ಧ ಮತ್ತು ಸುಚಿತ್ವದೊಂದಿಗೆ ಮಾಡಿರುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.
ಅವರು ಫೆಬ್ರವರಿ 28 ರಂದು ಉಳ್ಳಾಲ ಸಯ್ಯದ್ ಮದನಿ ದರ್ಗಾ ಷರೀಫ್ ನ 429 ನೇ ವಾರ್ಷಿಕ 21 ನೇ ಪಂಚವಾರ್ಷಿಕ ಉರೂಸ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಉರೂಸಿನ ಅಚ್ಚುಕಟ್ಟಾದ ಕಾರ್ಯಕ್ರಮ ಮತ್ತು ಅಭಿವೃದ್ಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕೆಪಿಸಿಸಿಯ ಪರವಾಗಿ ಅಭಿನಂದನೆ ಸಲ್ಲಿಸಿದರು.
ಅಧ್ಯಕ್ಷತೆಯನ್ನು ಸಯ್ಯದ್ ಮದನಿ ದರ್ಗಾ ಷರೀಫ್ ಸಮಿತಿಯ ಅಧ್ಯಕ್ಷ ರಶೀದ್ ಹಾಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮದನಿ ಕಾಲೇಜ್ ಪ್ರಿನ್ಸಿಪಾಲ್ ಉಸ್ಮಾನ್ ಫೈಝಿ ಖಲೀಲ್ ಹುದವಿ, ದರ್ಗಾ ಸಮಿತಿಯ ಉಪಾಧ್ಯಕ್ಷ ಯು.ಕೆ. ಮೋನು, ಫಾರೂಕ್ ಉಳ್ಳಾಲ, ಮುಸ್ತಫ ಅಬ್ದುಲ್ಲ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಸದಸ್ಯರಾದ ಎಸ್.ಕೆ. ಹನೀಫ್ ಮೊದಲಾದವರು ಉಪಸ್ಥಿತರಿದ್ದರು.