ಲಾಂಗ್ ಜಂಪ್: ಸನ್ಮಿತ್ ಆರ್.ಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ….
ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸನ್ಮಿತ್ ಆರ್.ಸಿ ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟ ಅ.19ರಿಂದ ಅ 23ರ ವರೆಗೆ ರಾಜಸ್ಥಾನದಲ್ಲಿ ಜರಗಲಿದೆ.
ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್‍ಜಂಪ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಬಳಿಕ ಶಿವಮೊಗ್ಗದ ನೆಹರೂ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ ಪಡೆದು ಆ ಬಳಿಕ ಶಿವಮೊಗ್ಗ ನೆಹರೂ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್‍ನಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸನ್ಮಿತ್ ಅವರು ಪುತ್ತೂರು ತಾಲೂಕಿನ ರೆಂಜ ನಿವಾಸಿ ಆರ್ ಸಿ ನಾರಾಯಣ ಮತ್ತು ಸುಮ ದಂಪತಿಗಳ ಪುತ್ರ.